ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆಗೆ ವಿರೋಧ, ವೈಎಸ್‌ವಿ ದತ್ತಾ ಸೇರಿ ಹಲವರಿಗೆ ಶಾಕ್ ನೀಡಿದ ಕಾಂಗ್ರೆಸ್, ಗೋಕಾಖ್‌ನಲ್ಲಿ ಭಿನ್ನಮತ, ಟಿಕೆಟ್ ಕೈತಪ್ಪಿದ್ದಕ್ಕೆ ಅಶೋಕ್ ಪೂಜಾರಿ ಬೆಂಬಲಿಗರ ಆಕ್ರೋಶ,ದೆಹಲಿಯಲ್ಲಿ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಆದರೆ ವರುಣಾ ತಮ್ಮ ಪುತ್ರನ ಕ್ಷೇತ್ರವಾಗಿರುವ ಕಾರಣ ಕೋಲಾರದಿಂದಲೂ ಸ್ಪರ್ಧಿಸಲು ಸಿದ್ದು ಬೇಡಿಕೆ ಇಟ್ಟಿದ್ದಾರೆ. ಆದರೆ ಸಿದ್ದರಾಯ್ಯನವರ ಎರಡು ಕ್ಷೇತ್ರ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲೇ ವಿರೋಧ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ನಿರಾಸಕ್ತಿ ತೋರಿದೆ. ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲೂ ಕೋಲಾರ ಕ್ಷೇತ್ರದ ರಹಸ್ಯ ಮುಂದುವರಿದಿದೆ. ಇದೀಗ ಸಿದ್ದುಗೆ ವರುಣಾ ಕ್ಷೇತ್ರ ಮಾತ್ರ ನೀಡುವ ಸಾಧ್ಯತೆ ದಟ್ಟವಾಗುತ್ತಿದೆ. ಈ ಮೂಲಕ ಸಿದ್ದರಾಮಯ್ಯನವರ ಹಲವು ಕನಸುಗಳಿಗೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ ದಟ್ಟವಾಗುತ್ತಿದೆ.