Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Published : Mar 15, 2023, 08:22 PM IST

ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ.

ರಾಯಚೂರು (ಮಾ.15): ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಪಿಎಸ್‌ಐ ಮಣಿಕಂಠ ಕಾಲರ್ ಹಿಡಿದು ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ತಳ್ಳಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನಿರ್ಮಾಣವಾಗಿರುವ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಶಾಸಕರ ಪುತ್ರ ಒತ್ತಾಯ ಮಾಡಿದ್ದು, ಕಾಂಗ್ರೆಸ್ ಕೈಯಲ್ಲಿರುವ ನಗರಸಭೆಯಿಂದ ಅಪ್ಪು ಹೆಸರಿಡಲು ವಿರೋಧವಾಗಿದೆ. 

ಹೀಗಾಗಿ ಸ್ಥಳೀಯ ಕಲಾವಿದರ ಹೆಸರಿಡಲು ಕಾಂಗ್ರೆಸ್ ಒತ್ತಾಯ ಮಾಡಿದ್ದು, ನಗರದ ಎಪಿಎಂಸಿಯಿಂದ ರಂಗಮಂದಿರದವರೆಗೆ ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಕರ್ತವ್ಯನಿರತ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿ 15 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ರಾಜಕುಮಾರ್ ಪುತ್ಥಳಿ ಪ್ರತಿಷ್ಟಾಪನೆ ವಿಚಾರ ನಡೆದ ಗಲಾಟೆಯಲ್ಲಿ ಅನುಮತಿ ಇಲ್ಲದೆ ಅಪ್ಪು ಪುತ್ಥಳಿ ಮೆರವಣಿಗೆ, ಪ್ರತಿಷ್ಟಾಪನೆಗೆ ಯತ್ನಿಸಿದ್ದು, ಮೆರವಣಿಗೆ ವೇಳೆ ಮಾತಿನ ಚಕಮಕಿ ನಡೆದು ಪಿಎಸ್‌ಐ ಮೇಲೆ ಹಲ್ಲೆ ಮಾಡಲಾಗಿದ್ದು, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more