ಕೇರಳದ ವಯನಾಡಿನಿಂದ ಸಂಸತ್ತಿಗೆ ಆಯ್ಕೆಯಾಗಿದ್ದ ರಾಹುಲ್ ಗಾಂಧಿ ಇತ್ತೀಚೆಗೆ ಜೈಲು ಶಿಕ್ಷೆ ಕಾರಣ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದಾದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದಾರೆ. ರಾಹುಲ್‌ಗೆ ಪ್ರಿಯಾಂಕಾ ಗಾಂಧಿ ಸಾಥ್ ನೀಡಿದ್ದಾರೆ.
ವಯನಾಡು(ಏ.11): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ, ಕೇರಳ ಕಾಂಗ್ರೆಸ್ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ. ಅನರ್ಹಗೊಂಡ ಬಳಿ ತಮ್ಮ ವಯನಾಡು ಕ್ಷೇತ್ರದಲ್ಲಿ ಮೊದಲ ಬಾರಿಗೆ ರೋಡ್ ಶೋ ನಡೆಸಿದ್ದಾರೆ. ಕಾಲ್‌ಪೆಟ್ಟಾ ಪಟ್ಟಣದಲ್ಲಿ ಸತ್ಯಮೇಯ ಜಯತೆ ರೋಡ್ ಶೋ ನಡೆಸಿದ ರಾಹುಲ್ ಗಾಂಧಿ, ಬಳಿಕ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ರೋಡ್ ಶೋನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಹಾಗೂ ಯುಡಿಆಫ್ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.