ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಸಮರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಂತನೆ

Jul 8, 2020, 3:30 PM IST

ಬೆಳಗಾವಿ, (ಜುಲೈ.08): ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. 

ಬೆಳಗಾವಿ: ರಮೇಶ ಜಾರಕಿಹೊಳಿ-ಲಕ್ಷ್ಮೀ ಹೆಬ್ಬಾಳಕರ ಕುಕ್ಕರ್‌ ವಾರ್‌..!

ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ, ಕುಕ್ಕರ್ ಹಂಚಿದ್ದು ನನ್ನ ದುಡ್ಡಲ್ಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದು ಕಾನೂನು ಸಮರಕ್ಕೆ ಇಳಿಯುವುದಾಗಿ ಹೇಳಿದ್ದಾರೆ.