ನನಗೆ ಆಗಿರುವ ಅಪಮಾನವನ್ನ ಇನ್ನೂ ಮರೆತಿಲ್ಲ: ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ!

ನನಗೆ ಆಗಿರುವ ಅಪಮಾನವನ್ನ ಇನ್ನೂ ಮರೆತಿಲ್ಲ: ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ!

Published : Jan 14, 2024, 08:46 PM IST

ವಿಧಾನಸಭೆ ಚುನಾವಣೆಯ ಟಿಕೆಟ್​ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 

ಹುಬ್ಬಳ್ಳಿ (ಜ.14): ವಿಧಾನಸಭೆ ಚುನಾವಣೆಯ ಟಿಕೆಟ್​ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಜಗದೀಶ್ ಶೆಟ್ಟರ್​ ಪ್ರತಿಕ್ರಿಯಿಸಿ, ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು. ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರ ಒತ್ತಾಸೆಯಾಗಿದೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರುವ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿ ಇದ್ದಾರೆ. ಆದರೆ ಹಲವಾರು ನಾಯಕರು ವಾಪಸ್ ತರುವಂತೆ ಒತ್ತಡ ಹಾಕ್ತಿರೋ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ವಾಪಾಸ್ಸಾಗಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಮತ್ತೆ ವಾಪಸಾಗುವುದಿಲ್ಲ. ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more