ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಲಾಭ ಪಡೆಯಲು ಕೈಪಡೆ ಸಜ್ಜು, ಮಡಿಕೇರಿ ಚಲೋಗೆ ಸಿದ್ಧತೆ

Aug 20, 2022, 4:31 PM IST

ಬೆಂಗಳೂರು/ಮೈಸೂರು, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೇ ಆಗಸ್ಟ್ 26ರಂದು ಕೊಡಗು ಎಸ್ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಇದರ ಮಧ್ಯೆ ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು  ಮಡಿಕೇರಿ ಚಲೋಗೆ ಸಿದ್ಧತೆ ಮಾಡಿಕೊಂಡಿದ್ದಾರೆ.ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ನಡೆಸಿದ್ದು ಪಾದಯಾತ್ರೆಯ ರೂಪುರೇಷೆ ಕುರಿತು ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಇದರ ಲಾಭ ಪಡೆಯಲು ಕಾಂಗ್ರೆಸ್ ಪ್ಲಾನ್ ಮಾಡಿದೆ.