Mar 13, 2023, 3:10 PM IST
ಚಾಮರಾಜನಗರ (ಮಾ.13): ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಆರ್.ಧ್ರುವನಾರಾಯಣ್ ಅವರ ಪುತ್ರನಿಗೆ ಟಿಕೆಟ್ ನೀಡುವ ಮೂಲಕ ನಂಜನಗೂಡು ಕ್ಷೇತ್ರದಲ್ಲಿ ಗೆಲ್ಲುವುದಕ್ಕೆ ಅನುಕಂಪದ ಅಸ್ತ್ರವನ್ನು ಬಳಸಲು ಮುಂದಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಆರ್.ಧ್ರುವನಾರಾಯಣ್ ಅವರ ಪುತ್ರನಿಗೆ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಚಿಂತನೆ ನಡೆಸಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವುದಕ್ಕೆ ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿ ಅನುಕಂಪದ ಲಾಭವನ್ನು ಗಳಿಸಲು ಮುಂದಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಿಷ್ಠಾವಂತ ಕಾರ್ಯಕರ್ತನ ಕಾರ್ಯಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳುವ ಮೂಲಕ ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರು ಕೂಡ ರೆಆಜ್ಯ ರಾಜಕಾರಣಕ್ಕೆ ಬರಲು ಇಚ್ಛೆ ವ್ಯಕ್ತಪಡಿಸಿದ್ದು, ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಕಾಂಗ್ರೆಸ್‌ಗೆ ಅರ್ಜಿಯನ್ನೂ ಸಲ್ಲಿಕೆ ಮಾಡಿದ್ದರು. ಈಗ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಧ್ರುವನಾರಾಯಣ ಅವರ ಪುತ್ರ ದರ್ಶನ್‌ಗೆ ಟಿಕೆಟ್ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.