News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

Published : Nov 07, 2022, 10:53 PM IST

ಈವರೆಗೂ ಸಿದ್ಧರಾಮಯ್ಯ ಬಣ, ಡಿಕೆ ಶಿವಕುಮಾರ್‌ ಬಣದ ನಡುವೆ ಗುದ್ದಾಡುತ್ತಿದ್ದ ಕಾರ್ಯಕರ್ತರಿಗೆ ಈಗ ಮತ್ತೊಂದು ಬಣದ ಬಿಸಿ ಎದುರಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಣ ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವಂತೆ ಕಂಡಿದೆ.
 

ಬೆಂಗಳೂರು (ನ.7): ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೊಂದು ಶಕ್ತಿ ಕೇಂದ್ರ ಸೃಷ್ಟಿ ಆಗಿದೆಯೇ ಎನ್ನುವ ಅನುಮಾನ ಕಾಡಿದೆ. ಈವರೆಗೂ ಸಿದ್ದರಾಮಯ್ಯ ಬಣ,ಶಿವಕುಮಾರ್ ಬಣದ ನಡುವೆ ಕಾರ್ಯಕರ್ತರು ಬಡಿದಾಡಿಕೊಳ್ಳುತ್ತಿದ್ದ ನಡುವೆ ಈಗ ಖರ್ಗೆ ಬಣ ಹುಟ್ಟಿಕೊಂಡಿರುವ ಸಾಧ್ಯತೆ ಕಂಡಿದೆ. ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗ್ತಿದ್ದಂತೆಯೇ ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.

ಖರ್ಗೆ ಭೇಟಿ ಮಾಡಿ ಹಿರಿಯ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಈಗಾಗಲೇ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ‘ನಾನು ಅರ್ಜಿ ಹಾಕ್ತೀನಿ, ತಮ್ಮ ಪುತ್ರನೂ ಅರ್ಜಿ ಹಾಕ್ತಾನೆ..!’ ಇಬ್ಬರಿಗೂ ಅವಕಾಶ ಕೊಡಿ ಎಂದು ಖರ್ಗೆ ಎದುರು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

ಮಾರ್ಗರೆಟ್ ಆಳ್ವಾ, ಅಲ್ಲಂ ವೀರಭದ್ರಪ್ಪ ಸೇರಿ ಹಲವರ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಶುಭಾಶಯ ಕೋರುತ್ತಲೇ ಮುಂದಿನ ವಿಧಾನಸಭೆ ಚುನಾವಣೆಗೆ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ. ಈ ನಡುವೆ ಶೇ.50 ಯುವಕರಿಗೆ ಟಿಕೆಟ್ ಎಂದು ಈಗಾಗಲೇ ಖರ್ಗೆ ಘೋಷಣೆ ಮಾಡಿದ್ದಾಗಿದೆ. ಹೀಗಾಗಿ ಹಿರಿಯ ನಾಯಕರಿಂದಲೂ ಖರ್ಗೆ ಭೇಟಿ ಹಾಗೂ ಮನವಿ ನೀಡುವ ಕೆಲಸಗಳು ನಡೆಯುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more