ಇಂದು 'ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ' ಎಂಬ ಹೆಸರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಕೈಪಡೆ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಲಿದೆ. 200 ಸಿಗ್ನಲ್, 25 ಫ್ಲೈ ಓವರ್ ಹಾಗೂ 25 ಮೆಟ್ರೋ ಸ್ಟೇಷನ್‌ಗಳಲ್ಲಿ ಪ್ರತಿಭಟನೆ ನಡೆಯಲಿದೆ. ಟ್ರಿನಿಟಿ ಸರ್ಕಲ್‌ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆಗೆ ಕಾಂಗ್ರೆಸ್ ತೀರ್ಮಾನಿಸಿದ್ದು, ಎಲ್ಲಾ ಶಾಸಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.