ಯುಗಾದಿ ಹಬ್ಬದಂದು ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಟಿಕೆಟ್ ಆಕಾಂಕ್ಷಿಗಳಿಗೆ ಢವಢವ

Mar 21, 2023, 10:11 PM IST

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಯುಗಾದಿ ಹಬ್ಬದ ದಿನವಾದ ಮಾರ್ಚ್ 22 ರಂದು ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ಘೋಷಣೆಗೂ ಮುನ್ನ ಮಂಡ್ಯದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಬಳಿಕ ಪಟ್ಟಿ ಬಿಡುಗಡೆಗೆ ತಯಾರಿ ಮಾಡಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.