ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

Jun 7, 2023, 3:06 PM IST

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕುಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಧ್ಯಮದವರ ಜತೆ ಮಾತನಾಡಿದ ಅವರು  ಮನೆ ಯಜಮಾನಿ ಬಗ್ಗೆ ಕುಟುಂಬದವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು.  ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.