ಡಿ.2ಕ್ಕೆ ದೆಹಲಿಗೆ ಆರ್‌.ಅಶೋಕ್, ವಿಜಯೇಂದ್ರ: ಬಹಿರಂಗ ಹೇಳಿಕೆ, ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ

ಡಿ.2ಕ್ಕೆ ದೆಹಲಿಗೆ ಆರ್‌.ಅಶೋಕ್, ವಿಜಯೇಂದ್ರ: ಬಹಿರಂಗ ಹೇಳಿಕೆ, ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ

Published : Nov 30, 2023, 11:22 AM IST

ಹೈಕಮಾಂಡ್ ಭೇಟಿ ವೇಳೆ ಅಸಮಾಧಾನಿತ ನಾಯಕರ ಬಗ್ಗೆ ಚರ್ಚೆ
ಬಹಿರಂಗ ಹೇಳಿಕೆ,ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ
ಸಂಘಟನೆ ಮೇಲಾಗುವ ಪರಿಣಾಮಗಳ ಬಗ್ಗೆ ಹೈಕಮಾಂಡ್ಗೆ ಮಾಹಿತಿ

ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ(B.Y. Vijayendra) ದೆಹಲಿಗೆ ತೆರಳಿದ್ದಾರೆ. ವಿಪಕ್ಷ ನಾಯಕ ಆರ್‌. ಅಶೋಕ್(R. Ashok) ಜೊತೆ ಹೈಕಮಾಂಡ್ ನಾಯಕರ(High command) ಭೇಟಿ ಮಾಡಲಿದ್ದಾರೆ. ಡಿಸೆಂಬರ್ 2ಕ್ಕೆ ಅಶೋಕ್ ಮತ್ತು ವಿಜಯೇಂದ್ರ ದೆಹಲಿಗೆ ತೆರಳಲಿದ್ದಾರೆ. ಅಸಮಾಧಾನಿತರಿಗಿಂತ ಮುನ್ನ ಸಮಾಧಾನಿತರು ದೆಹಲಿಗೆ(Delhi) ಹೋಗುತ್ತಿದ್ದು, ಅಸಮಾಧಾನಿತ ಸೋಮಣ್ಣ ತಂಡಕ್ಕೂ ಮುನ್ನ ವಿಜಯೇಂದ್ರ ಹೋಗುತ್ತಿದ್ದಾರೆ. ಹುದ್ದೆ ನೀಡಿದ್ದಕ್ಕೆ ಧನ್ಯವಾದವನ್ನು ಉಭಯ ನಾಯಕರು ತಿಳಿಸಲಿದ್ದಾರೆ ಎನ್ನಲಾಗ್ತಿದೆ. ಶೀಘ್ರದಲ್ಲೇ ಬೃಹತ್ ಸಮಾವೇಶ ಆಯೋಜನೆ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಪರಿಷತ್ ವಿಪಕ್ಷ ನಾಯಕ, ಉಳಿದ ಹುದ್ದೆಗಳ ನೇಮಕ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ತಯಾರಿ, ಸಂಘಟನೆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎನ್ನಲಾಗ್ತಿದೆ.ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಚರ್ಚಿಸಿ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆ ಇದ್ದು, ಡಿಸೆಂಬರ್ 7ರಂದು ದೆಹಲಿಗೆ ಸೋಮಣ್ಣ, ಅರವಿಂದ್ ಬೆಲ್ಲದ್ ತೆರಳಲಿದ್ದಾರೆ. ಬಸನಗೌಡ ಯತ್ನಾಳ್, ರಮೇಶ್ ಜಾರಕಿಹೊಳಿ ಕೂಡ ದೆಹಲಿಗೆ ಹೋಗಲಿದ್ದಾರೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿಯಲ್ಲಿ ಅದ್ಧೂರಿ ಮಕ್ಕಳ ದಿನಾಚರಣೆ: ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ಕಾರ್ಯಕ್ರಮ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more