ಬೆಂಗಳೂರು (ನ.11): ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಈಗಾಗಲೆ ಕಾಂಗ್ರೆಸ್ ಸೇರುವುದಾಗಿ ಧಿಕೃತವಾಗಿ ಪ್ರಕಟಿಸಿದ್ದಾರೆ. ಅನರ್ಹ ಶಾಸಕರ ಬಿಜೆಪಿ ಸೇರ್ಪಡೆ, ಪಕ್ಷದಲ್ಲಿ ಮೂಲ ಮತ್ತು ವಲಸಿಗರ ಸಂಘರ್ಷವನ್ನು ಹುಟ್ಟುಹಾಕಿದೆ. ಈಗಾಗಲೇ ಭಿನ್ನಮತ ಹೊಗೆಯಾಡುತ್ತಿದ್ದು, ಮತ್ತಿಬ್ಬರು ಬಿಜೆಪಿ ನಾಯಕರು ಬಂಡಾಯದ ಸುಳಿವು ಕೊಟ್ಟಿದ್ದಾರೆ. ಡಿ.05ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ-ಚುನಾವಣೆ ನಡೆಯಲಿದ್ದು, ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ. ನವೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: