Jan 18, 2021, 12:33 PM IST
ಬೆಂಗಳೂರು (ಜ. 18): ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಗಡಿಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧರಿರುವುದಾಗಿ ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ.
'ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ಉದ್ಧವ್ ಠಾಕ್ರೆ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ನಮ್ಮ ರಾಜ್ಯದ ಹಿತ ಕಾಪಾಡಲು ಎಲ್ಲಾ ಕೆಲಸವನ್ನು ನಾವು ಮಾಡ್ತೀವಿ. ಜನರು ಆತಂಕಗೊಳ್ಳುವ ಅಗತ್ಯವಿಲ್ಲ' ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕನ್ನಡಿಗರು ಶಾಂತಿ ಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ರಾಕ್ರೆಗೆ ಸಿದ್ದು ಟಕ್ಕರ್