Watch Video: ಒಕ್ಕಲಿಗರ ಕೋಟೆಯ ಮೇಲೆ ಡಿಕೆಶಿ, ಹೆಚ್‌ಡಿಕೆ ಕಣ್ಣು..!ವಿಧಾನಸಭಾ ಡ್ರೆಂಡ್ ಇಲ್ಲೂ ಮುಂದುವರೆಯುತ್ತಾ..?

Watch Video: ಒಕ್ಕಲಿಗರ ಕೋಟೆಯ ಮೇಲೆ ಡಿಕೆಶಿ, ಹೆಚ್‌ಡಿಕೆ ಕಣ್ಣು..!ವಿಧಾನಸಭಾ ಡ್ರೆಂಡ್ ಇಲ್ಲೂ ಮುಂದುವರೆಯುತ್ತಾ..?

Published : Apr 10, 2024, 05:39 PM IST

ರಾಜ್ಯದಲ್ಲಿ ಏಪ್ರಿಲ್ 26 ಮೊದಲ ಹಂತದ ಚುಣಾವಣೆ
ಮತದಾನ ನಡೆಯುವ 14 ಕ್ಷೇತ್ರಗಳಲ್ಲೂ ಒಕ್ಕಲಿಗರ ಬಲ
ಡಿಕೆಶಿ ಒಕ್ಕಲಿಗ ಟ್ರಂಪ್ ಕಾರ್ಟ್ ಇಲ್ಲೂ ವರ್ಕ್ ಆಗುತ್ತಾ..? 

ಲೋಕಸಭಾ ಚುಣಾವಣೆಗೆ ದಿನಗಳು ಹತ್ತಿರವಾಗುತ್ತಿವೆ. ಎಲ್ಲ ಪಕ್ಷಗಳ ಪ್ರಚಾರ ಜೋರಾಗಿದೆ. ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ಏಳು ಹಂತದಲ್ಲಿ ನಡೆಯಲಿರುವ ಚುನಾವಣೆ, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮುಗಿಯಲಿದೆ. ಮೊದಲನೇ ಹಂತ ಇದೇ ಏಪ್ರಿಲ್ 26ರಂದು ಮತದಾನ(Voting) ನಡೆಯಲಿದೆ. ಈ ಮೊದಲ ಹಂತದ ಮತದಾನದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಮತ್ತು ಎಚ್ಡಿ ಕುಮಾರಸ್ವಾಮಿ(HD Kumaraswamy) ವಿಶೇಷ ಕಣ್ಣಿಟ್ಟಿದ್ದಾರೆ. ಮೊದಲನೇ ಹಂತ ಏಪ್ರಿಲ್ 26 ರಂದು ದಕ್ಷಿಣ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಎರಡನೇ ಹಂತ ಮೇ. 7 ರಂದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS) ಪಕ್ಷಗಳು ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆ ಮೇಲೆ ವಿಶೇಷ ಕಣ್ಣಿಟ್ಟಿವೆ. ಅದರಲ್ಲೂ ಡಿಕೆಶಿ ಮತ್ತು ಎಚ್ಡಿಕೆ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಮೇಲೆ ವಿಶೇಷ ಆಸಕ್ತಿ ವಹಿಸಿದ್ದಾರೆ. ಯಾಕೆಂದ್ರೆ ಈ 14 ಕ್ಷೇತ್ರಗಳು ಸಹ  ಒಕ್ಕಲಿಗರೇ ವೋಟ್ಗಳೇ ನಿರ್ಣಾಯಕವಾಗಿರುವ ಕ್ಷೇತ್ರಗಳು. ಹೀಗಾಗಿ ಡಿಕೆಶಿ ಮತ್ತು ಎಚ್ಡಿಕೆ ಮೊದಲ ಹಂತದ ಮತದಾನದ ಮೇಲೆ ವಿಶೇಷ ಕಾಳಜಿ ವಹಿಸಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಮತದಾನದ 14 ಕ್ಷೇತ್ರಗಳು ಯಾವೆಂದು ನೋಡುವುದಾದ್ರೆ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್. ಈ ಹದಿನಾಲ್ಕು ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹದಿನಾಲ್ಕು ಕ್ಷೇತ್ರಗಳಿಂದ ಒಟ್ಟು 358 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 

ಇದನ್ನೂ ವೀಕ್ಷಿಸಿ:  ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more