Dec 26, 2019, 9:38 PM IST
ಬೆಂಗಳೂರು, [ಡಿ.26]: ರಾಜ್ಯ ನಾಯಕರ ಅಭಿಪ್ರಾಯ ಆಧರಿಸಿದ ವೀಕ್ಷಕರ ವರದಿಯಂತೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷಗಾದಿ ನೀಡುವುದು ಬಹುತೇಕ ಖಚಿತವಾಗಿದೆ. ಎಐಸಿಸಿಯಿಂದ ಮಧುಸೂದನ್ ಮಿಸ್ತ್ರಿ ಅಂಡ್ ಟೀಂ ರಾಜ್ಯಕ್ಕೆ ಆಗಮಿಸಿ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಬಗ್ಗೆ ಸುಮಾರು 50 ಕ್ಕೂ ಹೆಚ್ಚು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಗೆ ವರದಿ ಸಲ್ಲಿಸಿದ್ರು.
ಅದರಂತೆ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಡಿ.ಕೆ ಶಿವಕುಮಾರ್ ಅವರಿಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ನೀಡಲು ಮುಂದಾಗಿದೆ. ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಎಐಸಿಸಿ ವರಿಷ್ಠರ ತೀರ್ಮಾನ ಯಾವುದೇ ಕ್ಷಣದಲ್ಲಿ ಹೊರಬೀಳಲಿದೆ.
ಸಂಕ್ರಾಂತಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಕಾಂತಿ: ಡಿಕೆಶಿಗೆ ನ್ಯೂ ಇಯರ್ ಗಿಫ್ಟ್..?