ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

Published : Feb 25, 2022, 11:55 AM IST

 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ಎಚ್‌ಡಿ ಕುಮಾರಸ್ವಾಮಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು, (ಫೆ.25): ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರದ ಕಾರ್ಣಿಕ ವಾಣಿಯನ್ನು ವಿಶ್ಲೇಷಿಸಿದ್ದು, ನೈರುತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪತ್ಪರಿತವಾಗಿ ಇರುತ್ತದೆ ಎಂದಿದ್ದಾರೆ.

ಮೈಲಾರ ಕಾರ್ಣಿಕ ವಿಶ್ಲೇಷಣೆ: ನೈಋತ್ಯ ಭಾಗದ ಪ್ರಭಾವಿ ರಾಜ್ಯಭಾರ ಮಾಡಲಿದ್ದಾರೆ, ಯಾರು ಅವರು?

 ಮೈಲಾರದ ಕಾರ್ಣಿಕ ವಾಣಿ ವಿಶ್ಲೇಷಿಸಿದಂತೆ, ಕರ್ನಾಟಕದ ನೈಋತ್ಯ ಭಾಗವೆಂದರೆ ಹಳೇ ಮೈಸೂರು ಭಾಗ. ಸದ್ಯ ಈ ಭಾಗದ ಪ್ರಭಾವಿ ವ್ಯಕ್ತಿಗಳೆಂದರೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ. ಈಗಾಗಲೇ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರೂ ಇಲ್ಲ.

ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more