Sep 12, 2021, 4:08 PM IST
ಮೈಸೂರು, (ಸೆ.12): ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಗ್ರಹಾರದ 101 ಗಣಪತಿ ದೇವಸ್ಥಾನ ತೆರವಿಗೆ ಮುಂದಾಗಿರುವ ಮೈಸೂರು ಜಿಲ್ಲಾಡಳಿತದ ವಿರುದ್ಧ ಸಂಸದ ಪ್ರತಾಪ್ ಸಿಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಲ್ಲಿ 93 ದೇವಾಲಯ ತೆರವು : ಚರ್ಚ್ ಮತ್ತು ಮಸೀದಿ ಇಲ್ಲವೆ ಎಂದು ಸಿಂಹ ಆಕ್ರೋಶ
ಇಂದು (ಸೆ12) ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ಅಧಿಕಾರಿಗಳನ್ನ ತರಾಟಗೆ ತೆಗೆದುಕೊಂಡರು. ಇದೇ ವೇಳೆ ದೇಗುಲ ತೆರವಿನ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ಗೆ ಪ್ರತಾಪ್ ಸಿಂಹ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.