Aug 10, 2022, 4:07 PM IST
ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜತೆಗಿನ ಸ್ನೇಹ ಮುರಿದುಕೊಂಡು ತಮ್ಮ ಹಳೆಯ ಮಿತ್ರರಾದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಹಾಗೂ ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಇನ್ಮುಂದೆ ಯಾವುದೇ ಚರಾಸ್ತಿಯಿಲ್ಲ, ಪ್ರಧಾನಿ ನರೇಂದ್ರ ಮೋದಿ ಈಗ ಫಕೀರ ಮೋದಿ!
ರಾಜ್ಯದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ನಿರ್ಧಾರಕ್ಕೆ, 2024ರಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ದೂರಾಲೋಚನೆಯೂ ಒಂದು ಕಾರಣ ಎಂಬ ವಿಶ್ಲೇಷಣೆ ಕೇಳಿಬಂದಿದೆ. 2024ರಲ್ಲಿ ರಾಜ್ಯದಲ್ಲಿ ಸಿಎಂ ಹುದ್ದೆಯನ್ನು ಆರ್‌ಜೆಡಿ ನಾಯಕ ತೇಜಸ್ವಿಗೆ ಬಿಟ್ಟುಕೊಡುವ ವಾಗ್ದಾನಕ್ಕೂ ಇದೇ ಕಾರಣ ಎನ್ನಲಾಗುತ್ತಿದೆ.
ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಜೆಡಿಯು, ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ!
ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಉದ್ಧವ್ ಠಾಕ್ರೆಗಾದ ಪರಿಸ್ಥಿತಿ ತಮಗೂ ಬರುವ ಭೀತಿ, ತಮ್ಮ ಸರ್ಕಾರದಲ್ಲಿ ಅಮಿತ್ ಶಾ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ನಿತೀಶ್ ಅಸಮಾಧಾನ ಬಿಜೆಪಿ ಸಖ್ಯ ತೊರೆಯಲು ಕಾರಣ ಎನ್ನಲಾಗುತ್ತಿದೆ.