ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

Published : Apr 28, 2022, 02:31 PM ISTUpdated : Apr 28, 2022, 02:50 PM IST

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. ಇದರಿಂದಾಗಿ, 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ರಾಜಕೀಯ ತಂತ್ರಗಾರಿಕೆಯನ್ನು ಪ್ರಶಾಂತ್‌ ಕಿಶೋರ್‌ ನಿರ್ವಹಿಸಿ, ಪಕ್ಷವನ್ನು ಪುಟಿದೇಳಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ನಾಯಕತ್ವಕ್ಕೆ ಪ್ರಶಾಂತ್‌ ಕಿಶೋರ್‌ ಪ್ರಾತ್ಯಕ್ಷಿಕೆ ನೀಡಿದ್ದರು. ಆ ವೇಳೆ ಅವರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿತ್ತು. ಪ್ರಶಾಂತ್‌ ಅವರು ಈ ಆಹ್ವಾನದ ಬಗ್ಗೆ ಉತ್ಸುಕರಾಗಿದ್ದರು. ಆದರೆ, ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್‌ ಜತೆ ಪ್ರಶಾಂತ್‌ ಅವರ ಸಂಸ್ಥೆ ಐ-ಪ್ಯಾಕ್‌ ಚುನಾವಣಾ ತಂತ್ರಗಾರಿಕೆ ಒಪ್ಪಂದ ಮಾಡಿಕೊಂಡಿತ್ತು. ಇದನ್ನು ಕಾಂಗ್ರೆಸ್‌ ನಾಯಕತ್ವ ಹಿತಾಸಕ್ತಿಗಳ ವೈರುಧ್ಯವಾಗಿ ಕಂಡಿತ್ತು. ಇದಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಹೆಚ್ಚು ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅಧಿಕಾರಗಳನ್ನು ತಮಗೆ ನೀಡಬೇಕು ಎಂದು ಕಿಶೋರ್‌ ಬಯಸಿದ್ದರು. ಆದರೆ ಪಕ್ಷವು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್‌ ಸೇರದಿರುವ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.

 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more