Raghupathi Bhat: ಬಿಜೆಪಿಯಿಂದ ರಘುಪತಿ ಭಟ್ ಉಚ್ಛಾಟನೆ: 'ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ'

May 26, 2024, 6:06 PM IST

ಮಾಜಿ ಶಾಸಕ ರಘುಪತಿ ಭಟ (Former MLA Raghupathi Bhat) ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಈ ಸಂಬಂಧ ಉಡುಪಿಯಲ್ಲಿ(Udupi) ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪ್ರತಿಕ್ರಿಯೆ ನೀಡಿ, ಉಚ್ಛಾಟನೆಯಾದದ್ದು(Expelled) ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ, ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ, ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ, ನನ್ನದು ಕಾರ್ಯಕರ್ತ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಹಾಗೆಯೇ ಬಿಜೆಪಿ (BJP) ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಸ್ಪಷ್ಟಪಡಿಸಬೇಕು, ಟಿಕೆಟ್ ತಪ್ಪಿದಾಗ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು, ಪಕ್ಷ ನನ್ನನ್ನು ರಾಜ್ಯ ಕಾರ್ಯಕಾರಿ ಸದಸ್ಯನನ್ನೂ ಮಾಡಿಲ್ಲ, ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ, ನಾನು ಮೋದಿಗೆ ಬೈದಿಲ್ಲ,  ರಾಜ್ಯದ ನಾಯಕರಿಗೆ ಬೈದಿಲ್ಲ, ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ, ಪಕ್ಷ ನಾಯಕರನ್ನು ಟೀಕೆ ಮಾಡಿದ ಜಗದೀಶ್ ಶೆಟ್ಟರ್ ಒಂದು ವರ್ಷದಲ್ಲಿ ವಾಪಾಸಾದರು, ಪಕ್ಷಕ್ಕೆ ವಾಪಸ್ ಆಗಿ ಲೋಕಸಭಾ ಟಿಕೆಟ್ ಸಹ ಪಡೆದುಕೊಂಡಿದ್ದಾರೆ. ಆದರೆ ಇದು ಶಾಶ್ವತ ವಜಾ ಅಲ್ಲ,  ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ ಎಂದು ಹೇಳಿದ್ದಾರೆ.

ಒಬ್ಬ ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ, ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆ ಇದೆ,  ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆ?, ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನ ಏನು ಮಾಡಿದ್ದೀರಿ? ವಜಾ ಮಾಡಿದ್ದೀರಾ?, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಆದಿಲ್‌ ಸಾವು ಪ್ರಕರಣ: ನನ್ನ ಗಂಡ ಲೋಕಲ್ ಪೊಲೀಸರಿಗೆ ಪ್ರತಿ ತಿಂಗಳು ಮಾಮೂಲು ನೀಡ್ತಿದ್ದ ಎಂದ ಪತ್ನಿ!