Jan 18, 2021, 6:13 PM IST
ಬೆಂಗಳೂರು, (ಜ.18): ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಬೆಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್
ಇಂದು (ಸೋಮವಾರ) ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ. ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿಯ ಹೇಳಿಕೆ ಕೊಡಬಾರದು. ಇದು ಭಯೋತ್ಪಾಕ ಹೇಳಿಕೆ ಎನಿಸುತ್ತದೆ. ಈ ರೀತಿ ಕುಚೋದ್ಯದ ಹೇಳಿಕೆಗಳಿಗೆ ಪೂರ್ಣ ವಿರಾಮ ಹಾಕಬೇಕು ಎಂದರು.