Apr 24, 2023, 11:04 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿದ್ದರಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಬೆಳಗ್ಗೆ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಆದ್ರೆ ರಾತ್ರಿ ಹೆಚ್ಚಾದ ಕಾರಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅಲ್ಲೇ ಚುನಾವಣಾ ರಣತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗ್ತಿದೆ. ಯಾವ ಯಾವ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕು, ಅಭ್ಯರ್ಥಿಗಳನ್ನು ಯಾವ ರೀತಿ ತಯಾರಿ ಮಾಡಬೇಕು ಎಂಬುದರ ಬಗ್ಗೆ ಆಸ್ಪತ್ರೆಯಿಂದಲೇ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಗುಣಮುಖವಾದ ಬಳಿಕ ಎಲ್ಲಿಗೆ ಪ್ರಚಾರಕ್ಕೆ ಹೋಗಬೇಕು ಎಂಬ ನೀಲಿನಕ್ಷೆಯನ್ನ ಸಹ ತಯಾರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ವೀಕ್ಷಿಸಿ: ಹೆಚ್‌ಡಿಕೆಗೆ ಅನಾರೋಗ್ಯ, ಚುನಾವಣಾ ಪ್ರಚಾರ ಕಾರ್ಯಕ್ರಮಗಳು ದಿಢೀರ್ ರದ್ದು!