Feb 14, 2023, 10:51 PM IST
ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಕರ್ನಾಟಕ ಭೇಟಿಯಲ್ಲಿ ಮೋದಿ ಅಲೆ ಇರುವುದು ಸ್ಪಷ್ಟವಾಗಿದೆ. ಇಷ್ಟೇ ಅಲ್ಲ ಕರ್ನಾಟಕದ ಜನರ ನಾಡಿ ಮಿಡಿತ ಅರಿತಿದ್ದೇವೆ ಎಂದು ಅಮಿತ್ ಶಾ ಸಂದರ್ಶನದಲ್ಲಿ ಹೇಳಿದ್ದಾರೆ. ಇದೇ ವೇಳೆ ಕುಟುಂಬ ರಾಜಕಾರಣಕ್ಕೆ ವಿರುದ್ದ ಹರಿಹಾಯ್ದಿದ್ದಾರೆ. ಇತರ ಪಕ್ಷದಂತೆ ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಕೆಲ ಪಕ್ಷಗಳು ತಮ್ಮ ಕುಟುಂಬಸ್ಥರಿಗೆ ಅಧ್ಯಕ್ಷ ಪಟ್ಟ ನೀಡುತ್ತಾರೆ. ಅವರ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಾರೆ. ಈ ಪರಿಪಾಠ ಬಿಜೆಪಿಯಲ್ಲಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಯಾವುದೇ ಪಕ್ಷದ ಹೆಸರು ಹೇಳಿಲ್ಲ. ಆದರೆ ಇದು ತಮಗೆ ಹೇಳಿರುವುದು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಅಮಿತ್ ಶಾ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.