Jul 22, 2023, 2:44 PM IST
ಕಾಂಗ್ರೆಸ್ ಸರ್ಕಾರ ಹಾಲಿನ ದರವನ್ನು 3 ರೂಪಾಯಿಗೆ ಹೆಚ್ಚಿಸಲು ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಆಲ್ಕೋಹಾಲಿನ ಬೆಲೆ ಬಳಿಕ ಇದೀಗ ಹಾಲಿನ ದರ ಏರಿಕೆ( Milk Price Hike) ಮಾಡಲಾಗಿದೆ. ಈ ಮೂಲಕ ಶ್ರಮ ಜೀವಿಗಳ ಕಿಸೆಗೆ ಕನ್ನ ಹಾಕಿದೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಸ್ವತಃ ತಾವೇ ತಲೆ ಮೇಲೆ ಹೂ ಇಟ್ಟುಕೊಂಡಿದ್ದ ಕಾಂಗ್ರೆಸಿಗರು(Congress) ಈಗ ಜನರ ತಲೆ ಮೇಲೆ ಫ್ಲವರ್ ಪಾಟ್ ಇಟ್ಟಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ಆದ್ರೆ ಈಗ ಅವರು ಎಲ್ಲಾ ಬೆಲೆಗಳನ್ನು ಏರಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ವೀಕ್ಷಿಸಿ: ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!