ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿತ್ತು. ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಸಭೆ ನಡೆಸಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಹೇಳಿದ್ದಾರೆ. ರಾಜಕೀಯದಲ್ಲಿ ಊಹಾಪೋಹಗಳು ಇರುವುದು ಸಹಜ. ಇದೆಲ್ಲಾ ಗಾಳಿ ಸುದ್ದಿ. ಇದಕ್ಕೆಲ್ಲಾ ಯಾರೂ ಕಿವಿಗೊಡಬೇಡಿ. ನಾನು ಗೆದ್ದವರು ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ರೂಪುರೇಷೆಯನ್ನು ಸಿದ್ಧಪಡಿಸುತ್ತಿದ್ದೇವೆ. ನನಗೆ ಚುನಾವಣೆ ಮೇಲೆ ಒಲವಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆ ಮೇರೆಗೆ ರಾಜಕೀಯದಲ್ಲಿ ಇದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: ಅಮೆಜಾನ್ ಕಾಡಲ್ಲಿ 4 ಮಕ್ಕಳು.. 40 ದಿನ: ವಿಮಾನ ದುರಂತದಲ್ಲಿ ಇವರು ಬದುಕಿದ್ದೇ ಒಂದು ಪವಾಡ..!