Feb 5, 2022, 7:35 PM IST
ಬೆಂಗಳೂರು, (ಫೆ.05): ಹಿಜಾಬ್ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಇದು ಭಾರಿ ವಿವಾದಕ್ಕೀಡಾಗಿದ್ದು, ನಾಯಕರ ನಡುವೆ ಹಗ್ಗಾಜಗ್ಗಾಟ ನಡೆಯುತ್ತಿದೆ.
Hijab Row ಹಿಜಾಬ್, ಕೇಸರಿ ಶಾಲು ಜಟಾಪಟಿಗೆ ಬ್ರೇಕ್, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರ
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹಿಜಾಬ್ ಧರಿಸುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.