Mar 17, 2022, 7:45 PM IST
ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ.
Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ
ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಈಗ ಹಿಜಾಬ್ ವಿಧಾನಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.