ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

Published : Apr 13, 2023, 01:22 PM IST

ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ.

ಬೆಂಗಳೂರು (ಏ.13): ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈ ನಡೆಯನ್ನು ನಾನು ನಿರೀಕ್ಷೆ ಮಾಡಿದ್ದೆನು. ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಸಿಟಿ ರವಿ ವೈಯುಕ್ತಿಕ ದ್ವೇಷದಿಂದ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಸಿಟಿ ರವಿ ಪಕ್ಷಕ್ಕೆ ಒಳೆಯದು ಮಾಡೋದಿಲ್ಲ. ಬಿಜೆಪಿ ಮುಗಿಸುವವರೆಗೆ ಸಿ.ಟಿ. ರವಿ ವಿಶ್ರಾಂತಿ ಪಡೆಯಲ್ಲ. ನಾನು ರೈತರ ಪರವಾಗಿ ಪ್ರತಿಭಟನೆ ಮಾಡಿದ್ದೆ, ಅವರಿಗೆ ಪರಿಹಾರ ಕೊಡಿಸುವಲ್ಲಿಯೂ ನಾನು ಸಫಲನಾಗಿದ್ದೆ ಅದನ್ನು ಹೈಕಮಾಂಡ್ ಗೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಯಾವುದಾದರೂ ಪಕ್ಷಕ್ಕೆ ಹೋಗುತ್ತೇನೆ. ನಾನೇನು ರಾಜಕೀಯದಲ್ಲಿ ಸನ್ಯಾಸಿ ಅಲ್ಲ. ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿ ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್‌ಗೆ ಹೋಗೋದಾ ಅಥ್ವಾ ಜೆಡಿಎಸ್ ಗೆ ಹೋಗೋದಾ ಅನ್ನುವ ನಿರ್ಧಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವೆನು. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ. ನೀವು ದಯವಿಟ್ಟು ಮೊಬೈಲ್‌ ಸ್ವಿಚ್ ಆಫ್ ಮಾಡಿ. ಒಂದು ವೇಳೆ ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more