Jul 20, 2021, 6:06 PM IST
ಬೆಂಗಳೂರು, (ಜು.20): ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬೆಂಬಲ ನೀಡಿದ್ದಾರೆ.
ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ
ಇಂದು (ಮಂಗಳವಾರ) ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದರು. ವೇಳೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.