Jagadish Shettar: ಕೈಗೆ ಶೆಟ್ಟರ್ ಶಾಕ್.. ಕನ್ಫರ್ಮ್ ಆಯ್ತಾ ಬೆಳಗಾವಿ ಲೋಕಸಭೆ ಟಿಕೆಟ್..?

Jagadish Shettar: ಕೈಗೆ ಶೆಟ್ಟರ್ ಶಾಕ್.. ಕನ್ಫರ್ಮ್ ಆಯ್ತಾ ಬೆಳಗಾವಿ ಲೋಕಸಭೆ ಟಿಕೆಟ್..?

Published : Jan 26, 2024, 04:50 PM IST

ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದಿದ್ದ ಶೆಟ್ಟರ್ ಮರಳಿ ಗೂಡಿಗೆ..!
9 ತಿಂಗಳಲ್ಲಿ ಬದಲಾಯ್ತು ವರಸೆ.. ದೆಹಲಿಯಲ್ಲಿ ಕಮಲ ಹಿಡಿದ ಶೆಟ್ಟರ್..!
ಅಮಿತ್ ಶಾ ಭೇಟಿ..20 ನಿಮಿಷಗಳ ಮಾತುಕತೆ..ಬಿಜೆಪಿಗೆ ಶೆಟ್ಟರ್ ವಾಪಸ್..!

284 ದಿನಗಳ ಹಿಂದೆ ಬಿಜೆಪಿ ವಿರುದ್ಧ ಭುಸುಗುಟ್ಟಿ ಕಾಂಗ್ರೆಸ್(Congress) ಸೇರಿದ್ದ ಶೆಟ್ಟರ್. ಬಿಜೆಪಿಯಲ್ಲಿ ಅವಮಾನವಾಯ್ತು, ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಅಂತ ಅಬ್ಬರಿಸಿ ಕೈ ಪಾಳೆಯಕ್ಕೆ ಲಾಂಗ್ ಜಂಪ್ ಮಾಡಿದ್ರು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಪಕ್ಷಾಂತರಕ್ಕೆ ವರ್ಷ ತುಂಬುವ ಮೊದಲೇ ಶೆಟ್ಟರ್(Jagadish Shettar) ಮತ್ತೆ ಸುನಾಮಿ ಎಬ್ಬಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾದ 284 ದಿನಗಳ ನಂತರ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ(BS Yediyurappa) ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ(B.Y. Vijayendra) ಜೊತೆ, ದೆಹಲಿಯಲ್ಲಿ ಬಿಜೆಪಿ(BJP) ವರಿಷ್ಠರನ್ನು ಭೇಟಿಯಾದ ಶೆಟ್ಟರ್, ಮತ್ತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗ್ಬಹ್ದು ಅನ್ನೋದಕ್ಕೆ ಇದು ಮತ್ತೊಂದು ಉದಾಹರಣೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭ. ಬಿಜೆಪಿ ಟಿಕೆಟ್ ಕೊಡ್ಲಿಲ್ಲ ಅನ್ನೋ ಒಂದೇ ಒಂದು ಕಾರಣಕ್ಕಾಗಿ, ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್. ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಹೀಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದೇನೆ ಅಂದಿದ್ರು ಶೆಟ್ಟರ್. ಇದೀಗ ಅದೇ ಶೆಟ್ಟರ್, ಕಾಂಗ್ರೆಸ್‌ಗೆ ಕೈ ಕೊಟ್ಟು ಮರಳಿ ಗೂಡು ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಕಾಂಗ್ರೆಸ್'ನ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮತ್ತೆ ಬಿಜೆಪಿಗೆ ಜೈ ಅಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more