Feb 10, 2023, 11:01 AM IST
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಮೀಸಲಾತಿ ವಿಷಯದಲ್ಲಿ ಸರ್ಕಾರದ ನಡೆಗೆ ಜಯ ಮೃತ್ಯುಂಜಯ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಎಸ್‌ವೈ ಅವರನ್ನು ನಂಬಿ ಬಿಜೆಪಿಗೆ ಮತ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಜತೆ ಮಾತುಕತೆ ಇಷ್ಟ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ಜಯ ಮೃತ್ಯುಂಜಯ ಶ್ರೀಗಳು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮಧ್ಯಸ್ಥಿಕೆ ವಹಿಸಿ ಭರವಸೆ ನೀಡಿದ್ರಷ್ಟೇ ಪ್ರತಿಭಟನೆ ವಾಪಸ್ಸು ಪಡೆಯುವುದಾಗಿ ಅವರು ತಿಳಿಸಿದ್ದಾರೆ.