ರಾಜ್ಯದಲ್ಲಿ ಆರ್‌ಆರ್ ನಗರ, ಶಿರಾ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದಕ್ಕೆ ಜೆಡಿಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಬೆಂಗಳೂರು (ನ. 06): ರಾಜ್ಯದಲ್ಲಿ ಆರ್‌ಆರ್ ನಗರ, ಶಿರಾ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದಕ್ಕೆ ಜೆಡಿಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
'ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ಈ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ ಹಗಲು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು. ವಿಶೇಷವಾಗಿ ರಾಜರಾಜೇಶ್ವರಿ ಕ್ಷೇತ್ರದ ಉಸ್ತುವಾರಿಯಾಗಿದ್ದ ನನಗೆ ಸಹಕಾರ ನೀಡಿದ ಎಲ್ಲರಿಗೂ ಕೋಟಿ ಕೋಟಿ ನಮನ' ಎಂದು ಟ್ವೀಟ್ ಮಾಡಿದ್ದಾರೆ.