ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.
ಬೆಂಗಳೂರು (ಜೂ. 17): ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ (Janata Mitra) ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.
ಬೆಂಗಳೂರು ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಮತ್ತು ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜೂ.22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು.