Apr 21, 2023, 11:35 AM IST
ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್ ಶಾ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರೇ, ಜಗತ್ ಪ್ರಕಾಶ್ ನಡ್ಡಾ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್ ಶಾ ಮಧ್ಯಾಹ್ನ 3:20 ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದು ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ಹಾಗೇ ಸಂಜೆ ಅಮಿತ್ ಶಾ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಂದಿನ ಎರಡು ದಿನಗಳ ಕಾಲ ಅಮಿತ್ ಶಾ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.