ಸಂಚಲನ ಸೃಷ್ಟಿಸಿದ ಸಿದ್ದು ಹೇಳಿಕೆ, ಸ್ಪಷ್ಟನೆ ನೀಡಿದ ವಿಪಕ್ಷ ನಾಯಕ

Apr 4, 2023, 2:31 PM IST

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ. ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಆಕಾಂಕ್ಷಿ. ಆದರೆ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ ಎಂದಿದ್ದರು. ಈ ಬಗ್ಗೆ ವರದಿಗಳು ಪ್ರಕಟವಾಗುತ್ತಿದ್ದಂತೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಸಿಎಂ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ ಎಂದು ತಿಳಿಸಿದ್ದಾರೆ.