May 9, 2023, 10:37 AM IST
ಮೇ 10 ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡೆ ಶೋಭಾ ಗೌಡ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ವಿಚಕ್ಷಣ ದಳ ಪರಿಶೀಲನೆ ನಡೆಸಿದ್ದು, ರಸ್ತೆ ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮರದ ಬುಡದಲ್ಲಿ ಹಣ ಪತ್ತೆಯಾಗಿದೆ, ಅದಲ್ಲದೆ ಬ್ಯಾಗ್‌ನಲ್ಲಿ ಮೂರುಲಕ್ಷಕ್ಕು ಅಧಿಕ ಹಣ ಸಿಕ್ಕಿದ್ದು ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.