Mar 29, 2023, 1:02 PM IST
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿಜೆಪಿ ವಲಯದಲ್ಲಿ ಎಂ.ಪಿ.ಕುಮಾರಸ್ವಾಮಿ ಅವರ ಪರ-ವಿರೋಧದ ಬಣಗಳ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇನ್ನು ಟಿಕೆಟ್ ಸಂಬಂಧವಾಗಿ ನಡೆಯುತ್ತಿರುವ ಬಣ ಗುದ್ದಾಟ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಮೂಡಿಗೆರೆ ಕ್ಷೇತ್ರದಿಂದ ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ನೀಡಬಾರದು ಎಂದು ಒಂದು ಬಣ ಮುಂದಾಗಿದೆ. ಮತ್ತೊಂದೆಡೆ ಟಿಕೆಟ್ ನೀಡುವಂತೆ ಆಗ್ರಹಿಸಲಾಗಿದೆ. ಕುಮಾರಸ್ವಾಮಿ ಬೆಂಬಲಿತ ಕಾರ್ಯಕರ್ತರು ಸಿ.ಟಿ.ರವಿ ನಿವಾಸಕ್ಕೆ ಆಗಮಿಸಿ ಟಿಕೆಟ್ ನೀಡಬೇಕು ಎಂದು ಕೇಳಿಕೊಂಡರು.