Assembly election: ಹಾಸನ.. ಅರಸೀಕೆರೆ.. ಗೌಡರ ಕೋಟೆಯಲ್ಲಿ ಇದೆಂಥಾ ಯುದ್ಧ..?

Assembly election: ಹಾಸನ.. ಅರಸೀಕೆರೆ.. ಗೌಡರ ಕೋಟೆಯಲ್ಲಿ ಇದೆಂಥಾ ಯುದ್ಧ..?

Published : Feb 11, 2023, 02:12 PM IST

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮೂವರು ಸ್ಪರ್ಧಿಸಿ ಪೆಟ್ಟು ತಿಂದಿದ್ದೇವೆ. ತುಮಕೂರಿನಲ್ಲಿ ದೇವೇಗೌಡರು ಸೋತು, ಪಕ್ಷಕ್ಕೂ ಹಿನ್ನಡೆಯಾಗಿದೆ. ಈಗ ಮತ್ತದೇ ತಪ್ಪು ಮಾಡಿದರೆ ಒಟ್ಟಾರೆ ಫಲಿತಾಂಶದ ಮೇಲೆ ಪೆಟ್ಟು ಬೀಳಲಿದೆ.

ಹಾಸನ (ಫೆ.11): ದೇವೇಗೌಡರ ಕೋಟೆ ಭದ್ರವಾಗತ್ತದೆಯೋ ಇಲ್ಲ ಛಿದ್ರವಾಗುತ್ತದೆಯೋ. ಗೌಡರ ಒಡ್ಡೋಲಗದಲ್ಲಿ ದಿನಕ್ಕೊಂದು ಆಟ ಹಾಗೂ ಕ್ಷಣಕ್ಕೊಂದು ಟ್ವಿಸ್ಟ್‌ ಲಭ್ಯವಾಗುತ್ತಿದೆ.

ಅದರಲ್ಲಿ ಗೌಡರ ಹಿರಿಯ ಸೊಸೆ ಭವಾನಿ ಅವರ ಟಿಕೆಟ್‌ ಓಟಕ್ಕೆ ಬ್ರೇಕ್‌ ಹಾಕಲು ಹಾಸನದಿಂದಲೇ ಸ್ಪರ್ಧೆ ಮಾಡಲಿದ್ದಾರೆಯೇ ಎಚ್.ಡಿ. ರೇವಣ್ಣ. ಈ ಮೂಲಕ ಅತ್ತಿಗೆ ಭವಾನಿ ರೇವಣ್ಣ ಅವರಿಗೆ ಹಾಸನದಿಂದ ಜೆಡಿಎಸ್‌ ಟಿಕೆಟ್‌ ನೀಡದೇ ತಪ್ಪಿಸುವ ಯೋಜನೆಗೆ ಮೈದುನ ಎಚ್.ಡಿ. ಕುಮಾರಸ್ವಾಮಿ ಪ್ಲಾನ್‌ ಮಾಡಿದ್ದಾರೆ. ಅಣ್ಣ, ತಮ್ಮ, ಅತ್ತಿಗೆ, ಮೈದುನ, ಇಬ್ಬರು ಮಕ್ಕಳು ಹಾಸನ ಟಿಕೆಟ್‌ ಕದನದಲ್ಲಿ ತೊಡಗಿದ್ದಾರೆ. ಟಿಕೆಟ್‌ಗಾಗಿ ದಳಪತಿಯನ್ನೂ ಭವಾನಿ ರೇವಣ್ಣ ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಹಾಸನಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ ಎಂದು ಹೇಳಿದ್ದರು. ಜೊತೆಗೆ, ನಮ್ಮ ಕುಟುಂಬದಲ್ಲಿ ಇನ್ನೊಬ್ಬರು ಸ್ಪರ್ಧೆ ಮಾಡಿದರೆ ಕುಟುಂಬ ರಾಜಕಾರಣದ ಆರೋಪಕ್ಕೆ ನಾವೇ ಅಸ್ತ್ರ ನೀಡಿದಂತಾಗಲಿದೆ.

ಬಿಜೆಪಿ, ಕಾಂಗ್ರೆಸ್‌ ಆಡಳಿತದಲ್ಲಿ ಜನರ ಬದುಕಿನ ಜೊತೆ ಚೆಲ್ಲಾಟ: ಎಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮೂವರು ಸ್ಪರ್ಧಿಸಿ ಪೆಟ್ಟು ತಿಂದಿದ್ದೇವೆ. ಇದೇ ಕಾರಣದಿಂದ ತುಮಕೂರಿನಲ್ಲಿ ದೇವೇಗೌಡರು ಸೋತು, ಪಕ್ಷಕ್ಕೂ ಹಿನ್ನಡೆಯಾಗಿದೆ. ಈಗ ಮತ್ತದೇ ತಪ್ಪು ಮಾಡಿದರೆ ಒಟ್ಟಾರೆ ಫಲಿತಾಂಶದ ಮೇಲೆ ಪೆಟ್ಟು ಬೀಳಲಿದೆ. ಹೀಗಾಗಿ, ಹಾಸನ ಟಿಕೆಟ್‌ ವಿಚಾರದಲ್ಲಿ ಯೋಜನೆ ಮಾಡಿ ನಿರ್ಧಾರ ಕೈಗೊಳ್ಳುವಂತೆ ಕುಮಾರಸ್ವಾಮಿ ಸಹೋದರ ರೇವಣ್ಣ ಕುಟುಂಬಕ್ಕೆ ತಿಳಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more