ಕುಲದೇವತೆ ಸೂಚನೆಯಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದು..?

Mar 26, 2023, 1:21 PM IST

ಕಾಂಗ್ರೆಸ್‌ ಮೊದಲ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್‌ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಟಿಕೆಟ್‌ ನೀಡಿದೆ. ಆದರೆ ಸಿದ್ದರಾಮಯ್ಯ  ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.ಹೀಗಾಗಿ ಸಿದ್ದರಾಮಯ್ಯ  ಚಿಕ್ಕಮ್ಮತಾಯಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಇನ್ನು ಪುತ್ರ ಯತೀಂದ್ರ ಆದಿನಾಡು ಚಿಕ್ಕಮ್ಮತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಅರ್ಚಕ ಲಿಂಗಣ್ಣ ಮೈ ಮೇಲೆ ಚಿಕ್ಕಮ್ಮತಾಯಿ ಬಂದು ಸಿದ್ದರಾಮಯ್ಯ ಸ್ಪರ್ಧೆಯ ವಿಚಾರವಾಗಿ ಮಾತನಾಡಿದ್ದು,  ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ನುಡಿದಿತ್ತು. ಒಟ್ಟಿನಲ್ಲಿ ರಾಜಕೀಯ ಕಾರಣಕ್ಕೋ ಅಥವಾ ದೇವಿಯ ಮಾತಿಗೋ ಸಿದ್ದರಾಮಯ್ಯ ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.