May 3, 2023, 11:34 AM IST
ಚುನಾವಣೆ ಹೊಸ್ತಿಲಲ್ಲಿ ಎಲ್ಲಾ ಪಾರ್ಟಿಗಳು ತಮ್ಮ ತಮ್ಮ ಪ್ರಣಾಳಿಕೆ ಜನರ ಮುಂದಿಡುವುದು ವಾಡಿಕೆ. ಆದರೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ, ಹೊಸ ಟ್ವಿಸ್ಟ್ ಕೊಟ್ಟಿದೆ.. ಹೊಸ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟ ಹಾಗೆ ಕಾಣುತ್ತಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ತಾನು ಅಧಿಕಾರಕ್ಕೆ ಬಂದರೆ, ಮುಂದಿನ 5 ವರ್ಷದ ತಮ್ಮ ಅಭಿವೃದ್ದಿಯನ್ನು ಹೇಳಿಕೊಂಡಿದೆ. ಇದರಲ್ಲಿ ಪ್ರಮುಖವಾಗಿ ಬಿಜೆಪಿ ಜಾರಿಗೆ ತಂದ ಎಲ್ಲಾ ಜನ ವಿರೋಧಿ ಕಾನೂನುಗಳನ್ನು ಒಂದು ವರ್ಷದಲ್ಲಿ ರದ್ದು ಮಾಡುತ್ತೇವೆ ಎನ್ನುವಂತದ್ದು.. ಅದರ ಜೊತೆಗೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿಎಫ್‍ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನ ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧ ಸೇರಿದಂತೆ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ. ಹಾಗಾದರೆ ಕಾಂಗ್ರೆಸ್ ಪ್ರಣಾಳಿಕೆ ಕೈ ಪಾಳಯಕ್ಕೆ ತಂದಿತಾ ಸವಾಲು..? ಭಜರಂಗದಳ ನಿಷೇಧಿಸೋಕೆ ಏನಿದೆ ಕಾರಣ.?