WATCH: ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪ ಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ಫಿಕ್ಸ್!

Oct 17, 2024, 7:59 PM IST

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನ.13ರಂದು ಉಪ ಚುನಾವಣೆ ಆಗಲಿದ್ದು, ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಭಾರಿ ಕುತೂಹಲ ಕೆರಳಿಸಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಸಮರದಲ್ಲಿ ಘಟಾನುಘಟಿನ ನಾಯಕರು ತಮ್ಮ ಶಾಸಕ ಸ್ಥಾನವನ್ನು ತೊರೆದು ಸಂಸತ್ತಿಗೆ ಹೋಗಿದ್ದರಿಂದ ಮೂರು ವಿಧಾನಸಭಾ ಕ್ಷೇತ್ರಗಳು ಖಾಲಿಯಾಗಿವೆ. ಈ ಖಾಲಿಯಾದ ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ನ.13ಕ್ಕೆ ಚುನಾವಣೆಯನ್ನು ನಿಗದಿ ಮಾಡಲಾಗಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ. ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮೂರು ಪಕ್ಷಗಳಿಂದ ಭಾರಿ ರಾಜಕೀಯ ಪೈಪೋಟಿ ಶುರುವಾಗಿದೆ. 

ಕರ್ನಾಟಕದಲ್ಲಿ ನ.13ರಂದು ಉಪಾ ಚುನಾವಣೆ ಎದುರಿಸುತ್ತಿರುವ ಕ್ಷೇತ್ರಗಳಾದ ಮಂಡ್ಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಲೋಕಸಭೆಯಿಂದ ಸಂಸತ್ತಿಗೆ ಆಯ್ಕೆಯಾದ ತುಕಾರಾಂ ಅವರ ಸಂಡೂರು ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಲ್ಲಿ ಭಾರೀ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ.

ಒಟ್ಟಾರೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸಂಡೂರು ಕ್ಷೇತ್ರದಲ್ಲಿ, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಶಿಗ್ಗಾವಿ ಕ್ಷೇತ್ರದಲ್ಲಿ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ ಚನ್ನಪಟ್ಟಣ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಸಂಸತ್ತಿಗೆ ಕಳಿಸಲಾಗಿದೆ. ಆದರೆ, ತೆರವಾಗಿದ್ದು ಮೂರು ಪಕ್ಷಗಳ ಒಬ್ಬೊಬ್ಬ ಅಭ್ಯರ್ಥಿಗಳಾಗಿದ್ದರೂ, ಮೂರೂ ಪಕ್ಷಗಳನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಬೇಕು ಎಂದು ಹವಣಿಸುತ್ತಿವೆ. ಅದರಲ್ಲಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಮಣ್ಣು ಮುಕ್ಕಿಸಲು ಯೋಜನೆ ರೂಪಿಸುತ್ತಿವೆ. ಹಾಗಾದರೆ, ಈ ಮೂರೂ ಕ್ಷೇತ್ರಗಳಲ್ಲಿ ಯಾವ ಪಕ್ಷಗಳಿಂದ ಯಾರು ಅಭ್ಯರ್ಥಿಗಳು ಆಗುತ್ತಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ...