ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ, ಬೀದಿಗೆ ಬಂತು ಬಂಡಾಯ

Nov 16, 2019, 3:42 PM IST

ಹಾವೇರಿ (ನ.16): ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ. ರಾಣೆಬೆನ್ನೂರಿನಿಂದ ಅರುಣ್ ಕುಮಾರ್ ಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಬಸವರಾಜ್ ಕೆಲಗರ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಟೈರ್‌ಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ಕ್ಷೇತ್ರಗಳಿಗೆ  ಉಪಚುನಾವಣೆ ನಡೆಯಲಿದೆ.  ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.