News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

Published : May 26, 2023, 11:39 PM IST

ಅಂತೂ ಇಂತೂ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಿಕ್ಕಿಯಾಗಿದೆ. 24 ಸಚಿವರ ಪಟ್ಟಿ ಅಂತಿಮವಾಗಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಜಾತೀವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಲಾಗಿದೆ.

ಬೆಂಗಳೂರು (ಮೇ.26): ದೆಹಲಿಯಲ್ಲಿ ಸಚಿವರ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮ ಮಾಡಿದೆ. 24 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಜಾತಿವಾರು ಹಾಗೂ ಪ್ರಾದೇಶಿಕವಾರು ಲೆಕ್ಕಾಚಾರದಲ್ಲಿ ಕ್ಯಾಬಿನೆಟ್‌ಅನ್ನು ಅಂತಿಮ ಮಾಡಲಾಗಿದೆ. ಟಫ್‌ ಫೈಟ್‌ ನಡುವೆ ಎಂಎಲ್‌ಎ ಹಾಗೂ ಎಂಎಲ್‌ಸಿಯೂ ಅಲ್ಲದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ ಸರ್ಕಾರ ಹೊಸ ಮುಖಕ್ಕೆ ಆದ್ಯತೆ ನೀಡಿದೆ. ಭವಿಷ್ಯದ ದೃಷ್ಟಿಯಿಂದ ಯುವ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಹಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

Karnataka Cabinet Expansion: 24 ನೂತನ ಸಚಿವರ ಪಟ್ಟಿ ಬಿಡುಗಡೆ, 7 ಲಿಂಗಾಯತರಿಗೆ ಸ್ಥಾನ

ಇನ್ನೊಂದೆಡೆ, ಸರ್ಕಾರ ಬಂದು ಇಷ್ಟು ದಿನಗಳಾದರೂ ಇನ್ನೂ ಐದು ಗ್ಯಾರಂಟಿ ಘೋಷಣೆ ಜಾರಿಯಾಗಿಲ್ಲ. ಇದರ ನಡುವೆ ವಿರೋಧ ಪಕ್ಷಗಳು ಕೂಡ ಕಾಂಗ್ರೆಸ್‌ನ ಗ್ಯಾರಂಟಿಗಾಗಿ ಪಟ್ಟು ಹಿಡಿದಿದೆ. ಆದಷ್ಟು ಬೇಗ ಇದು ಜಾರಿಯಾಗದೇ ಇದ್ದರೆ, ಹೋರಾಟ ಮಾಡಲು ಸಿದ್ಧ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೇಳಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more