Dec 17, 2019, 6:15 PM IST
ಶಿವಮೊಗ್ಗ(ಡಿ.17) ಡಿಸಿಎಂ ಸ್ಥಾನ ಹೆಚ್ಚು-ಕಡಿಮೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಡಿಸಿಎಂ ಸ್ಥಾನದ ಬಗ್ಗೆ ಮಾತನಾಡಿರುವ ಶ್ರೀರಾಮುಲು ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಕಟೀಲ್ ಪಕ್ಷದಲ್ಲಿ ಮೂಲ ಮತ್ತು ವಲಸಿಗರು ಎಂಬ ತಾರತಮ್ಯ ಇಲ್ಲ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸಿದ್ದೇವೆ ಅದರಂತೆ ಮುಂದೆ ಹೋಗುತ್ತೇವೆ ಎಂದು ಹೇಳಿದ್ದಾರೆ.