ಸಿದ್ದು ಸಭೆಗೆ ಬಾರದ ಮೂಲ ಕಾಂಗ್ರೆಸ್ಸಿಗರ ದೊಡ್ಡ ಪಟ್ಟಿ, ಅರ್ಧಕ್ಕೆ ಹೊರ ನಡೆದ ಡಿಕೆಶಿ

Nov 10, 2019, 5:52 PM IST

ಬೆಂಗಳೂರು[ನ. 10] ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ರಾಮಲಿಂಗಾ ರೆಡ್ಡಿ ಸಿದ್ದು ಅವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ನಿಮಗೆ ಬೇಕೆಂದಾಗ ಸಭೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.