May 12, 2023, 10:41 AM IST
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್ ಪೋಲ್ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಕಾಂಗ್ರೆಸ್ ನಾಯಕರ ನಿರೀಕ್ಷೆ ಸುಳ್ಳಾಗಿ ಅತಂತರ ಫಲಿತಾಂಶ ಬಂದು ಹಿಂದೆನಂತೆ ನಮ್ಮ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾದರೇ ಎನ್ನುವ ಪ್ರಶ್ನೆ ಕಾಂಗ್ರೆಸ್ ನಾಯಕರನ್ನು ನಿದ್ದೆಗೆಡಿಸಿದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಪ್ಲಾನ್ ಬಿ ರೆಡಿ ಮಾಡಿದ್ದಾರೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಗುರುವಾರ ತಡರಾತ್ರಿ ವರ್ಚುವಲ್ ಮೀಟಿಂಗ್ ಮಾಡಿದ್ದಾರೆ. ಈ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಿದ್ದು, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.