ಮೊದಲು ಕ್ಯಾಬಿನೆಟ್ ಸಭೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ರಾಹುಲ್ ಗಾಂಧಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿ(ಮೇ.13): ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿಗೆ ಕೇಂದ್ರ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. ಗೆಲ್ಲಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಬಂದ ಫಲಿತಾಂಶ ಇತರ ರಾಜ್ಯದಲ್ಲೂ ಆಗಲಿದೆ. ಕರ್ನಾಟಕದಲ್ಲಿ ಬಂಡವಾಳ ಶಕ್ತಿ ವಿರುದ್ಧ ಜನಸಾಮಾನ್ಯರ ಶಕ್ತಿ ಗೆಲುವು ಕಂಡಿದೆ. ನಾವು ಕರ್ನಾಟಕದಲ್ಲಿ ದ್ವೇಷದ ಹೇಳಿಕೆ, ಕಠೋರ ಮಾತಿನಿಂದ ಚುನಾವಣೆ ಹೋರಾಡಿಲ್ಲ. ನಾವು ಪ್ರೀತಿಯಿಂದ ಕರ್ನಾಟಕದ ಜನತೆ ಮನಸ್ಸು ಗೆದ್ದಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದು ಕರ್ನಾಟಕದ ಜನರ ಗೆಲುವು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.