Karnataka Election Results 2023: ಬಿಜೆಪಿಯ ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೋರುತ್ತೆನೆ: ಸಿಎಂ ಬೊಮ್ಮಾಯಿ

Karnataka Election Results 2023: ಬಿಜೆಪಿಯ ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೋರುತ್ತೆನೆ: ಸಿಎಂ ಬೊಮ್ಮಾಯಿ

Published : May 13, 2023, 03:00 PM ISTUpdated : May 13, 2023, 03:19 PM IST

ಜನರ ಈ ತೀರ್ಪನ್ನು ಅತ್ಯಂತ ಗೌರವ ಪೂರ್ವಕವಾಗಿ ನಾನು ಒಪ್ಪಿಕೊಳ್ಳುತ್ತೇನೆ. ಬಿಜೆಪಿಯ ಈ ಸೋಲಿನ‌ ಜವಾಬ್ದಾರಿಯನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನಾನೇ ಹೊರುತ್ತೇನೆ. ಇದನ್ನು ಯಾರ ಹೆಗಲಿಗೂ ಹಾಕುವುದಿಲ್ಲ ಎಂದು‌ ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ‌ ಹೇಳಿದರು.

ಹಾವೇರಿ (ಮೇ.13): ಜನರ ಈ ತೀರ್ಪನ್ನು ಅತ್ಯಂತ ಗೌರವ ಪೂರ್ವಕವಾಗಿ ನಾನು ಒಪ್ಪಿಕೊಳ್ಳುತ್ತೇನೆ. ಬಿಜೆಪಿಯ ಈ ಸೋಲಿನ‌ ಜವಾಬ್ದಾರಿಯನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನಾನೇ ಹೊರುತ್ತೇನೆ. ಇದನ್ನು ಯಾರ ಹೆಗಲಿಗೂ ಹಾಕುವುದಿಲ್ಲ ಎಂದು‌ ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ‌ ಹೇಳಿದರು. ಹಾವೇರಿ ದೇವಗಿರಿಯ ಮತ ಎಣಿಕೆ‌ ಕೇಂದ್ರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಈ ಸೋಲಿನ ಬಗ್ಗೆ ಸಂಪೂರ್ಣವಾದ ಪರಾಮರ್ಶೆ ಮಾಡುವ ಅವಶ್ಯಕತೆ ಇದೆ. ಇದಕ್ಕೆ ಹಲಾವರು ಕಾರಣಗಳಿವೆ. ಇದನ್ನು ಪಕ್ಷದಲ್ಲಿ ಆಂತರಿಕ ವಾಗಿ ಆತ್ಮಾವಲೋಕನ ಮಾಡುತ್ತೇವೆ. 

ಪ್ರತಿಯೊಂದು ಕ್ಷೇತ್ರದ ಕುರಿತು ಕೂಲಂಕಷವಾಗಿ ಪರಿಶೀಲನೆ ಮಾಡುತ್ತೇವೆ. ಏನೆಲ್ಲ ಕೊರತೆಗಳು ಆಗಿವೆ. ಅವುಗಳನ್ನು ನೀಗಿಸಿ ಮತ್ತೊಮ್ಮೆ ಸಂಘಟಿತರಾಗಿ ಮತ್ತೆ ಪುಟಿದು ಏಳುವ ಪಕ್ಷ ಬಿಜೆಪಿ. ಮುಂಬರುವಂಥ ಸಂಸತ್ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಎಲ್ಲ ಸಂಘಟನಾತ್ಮಕ ಬಲದಿಂದ ತಪ್ಪುಗಳನ್ನು ಸರಿ ಮಾಡಿಕೊಂಡು ತಯಾರಿ ಮಾಡಿಕೊಳ್ಳುತ್ತೇವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ಮೋದಿ, ಅಮಿತ್ ಷಾ ಪ್ರಚಾರ ಕೈ ಹಿಡಿಯಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸೋಲಿಗೆ ಹಲವಾರು ಕಾರಣಗಳಿವೆ. ಅದನ್ನು ಅವಲೋಕನ ಮಾಡಿದಾಗ ಗೊತ್ತಾಗುತ್ತದೆ. ಈ ಬಗ್ಗೆ ಈಗಲೇ ಹೇಳುವುದು ಸರಿಯಲ್ಲ ಎಂದರು. 

Karnataka Election 2023 Live: ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದೆ ಕುತೂಹಲವೀಗ!

ಶಿಗ್ಗಾಂವಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಲ್ಲಿ ಗೆಲುವು ಕುರಿತು ಮಾತನಾಡಿದ ‌ಸಿಎಂ, ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳು ಕೈಹಿಡಿದಿವೆ. ಬೆಂಬಲಿಸಿದ್ದಾರೆ. ನಿರಂತರವಾಗಿ ನಾಲ್ಕನೇ ಬಾರಿಗೆ ಬೆಂಬಲ‌ ಕೊಟ್ಟಿದ್ದಾರೆ. ನಾನು ಇನ್ನಷ್ಟು ಜವಾಬ್ದಾರಿಯಿಂದ ಕೆಲಸ‌ಮಾಡುತ್ತೇನೆ. ಕಾಂಗ್ರೆಸ್ ಗೆಲುವಿಗೆ ಕಾರಣ ಅವರು ಹೇಳಬೇಕು. ಅವರು‌ ನಮಗಿಂತ ವ್ಯವಸ್ಥಿತವಾಗಿ ಚುನಾವಣೆ ಮಾಡಿದ್ದಾರೆ ಎನಿಸುತ್ತದೆ‌ ಎಂದರು. 16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more