Mar 30, 2023, 6:21 PM IST
ಬೆಂಗಳೂರು (ಮಾ.30): ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಟ್ವೀಟ್ ವಾರ್ ಶುರುವಾಗಿದೆ. ರಾಮನವಮಿ ಶುಭ ಕೋರಿ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಗೆ ಬಿಜೆಪಿ ಕೂಡ ಟಾಂಗ್ ಕೊಟ್ಟಿದೆ. ಅದಕ್ಕೆ ಪ್ರತಿಟ್ವೀಟ್ ಮೂಲಕ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ.
ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಟಾಂಗ್ ನೀಡುವ ಉದ್ದೇಶದಿಂದ ಬಿಜೆಪಿ ವತಿಯಿಂದ "ಪ್ರಭು ಶ್ರೀ ರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ.. ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ವಿರುದ್ಧವೇ ಸಮರ ಸಾರಿದ… ಪ್ರಭು ಶ್ರೀ ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ… ಅಲ್ಪರ ಗುಂಪಿನ ‘Poster Boy’ ಸಿದ್ದರಾಮಯ್ಯನವರು ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ ಎಂದು ಟೀಕೆ ಮಾಡಿತ್ತು.
ಇದಕ್ಕೆ ಪ್ರತಿಟ್ವೀಟ್ ಮೂಲಕ ಕೌಂಟರ್ ಕೊಟ್ಟ ಸಿದ್ದರಾಮಯ್ಯ ಅವರು, "ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು. ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು. ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ" ಎಂದು ಟ್ವೀಟ್ ಮಾಡಿದ್ದಾರೆ.
ಪ್ರಭು ಶ್ರೀ ರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ..
ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ವಿರುದ್ಧವೇ ಸಮರ ಸಾರಿದ…
ಪ್ರಭು ಶ್ರೀ ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ…
ಅಲ್ಪರ ಗುಂಪಿನ ‘Poster Boy’ ನವರು
ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ. https://t.co/dhFql6OY7k